ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Siddaramaia 11 Dec 19
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಬೆನ್ನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಜ್ವರ ಕಾಣಿಸಿಕೊಂಡಿತ್ತು.

ಪುತ್ರ ಡಾ.ಯತೀಂದ್ರ ಅವರ ಸಲಹೆ ಮೇರೆಗೆ ಸಿದ್ದರಾಮಯ್ಯ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಮೂತ್ರನಾಳದ ಸೋಂಕು ಕೂಡಾ ತಗುಲಿದೆ. ಸಿದ್ದರಾಮಯ್ಯ ಅವರೂ ಕರೊನಾ ಪರೀಕ್ಷೆಗೆ ಒಳಪಡುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net