ಮಾಜಿ ಸಿಎಂ ಸಿದ್ದರಾಮಯ್ಯಗೂ ಕರೊನಾ ಸೋಂಕು ದೃಢ

Siddaramaiah
Published on

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೂತ್ರನಾಳದ ಸೋಂಕು ಮತ್ತು ಜ್ವರದಿಂದ ಬಳಲಿದ್ದರು ಎಂದು ಹೇಳಲಾಗಿತ್ತು. ಪುತ್ರ ಡಾ.ಯತೀಂದ್ರ ಸಲಹೆ ಮೇರೆಗೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆಸ್ಪತ್ರೆಗೆ ದಾಖಲಾದ ಕೂಡಲೇ ಅವರು ಕರೊನಾ ಟೆಸ್ಟ್​ಗೆ ಒಳಗಾಗಿದ್ದರು. ಇಂದು ಬೆಳಗ್ಗೆ ಅವರ ಕರೊನಾ ಟೆಸ್ಟ್ ಫಲಿತಾಂಶ ಸಿಕ್ಕಿದೆ. ಅವರ ಪುತ್ರ ಡಾ.ಯತೀಂದ್ರ ಈ ಸಂಬಂಧ ಟ್ವೀಟ್ ಮಾಡಿದ್ದು, "ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ" ಎಂದು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ಟ್ವೀಟ್ ಮಾಡಿದ್ದು, "ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ"  ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಕರೊನಾ ಸೋಂಕು ದೃಢಪಟ್ಟು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net