

ಬೆಂಗಳೂರು: ಮಾಜಿ ಸಚಿವ ಬಿ.ಡಿ. ಬಸವರಾಜ್(85) ಅವರು ಸೋಮವಾರ ಬೆಳಗ್ಗೆ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ 7 ದಿನ ಶಿಕ್ಷಣ ಸಚಿವರಾಗಿದ್ದ ಬಸವರಾಜ್ ನೇರ ನುಡಿ ನಾಯಕರಾಗಿದ್ದರು. ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕಾಗಿ ಹಲವು ಮುಖಂಡರನ್ನು ಬೆಳೆಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಅವರಿಗೆ ಆತ್ಮೀಯರಾಗಿದ್ದರು. ದೇವೇಗೌಡರ ವಿರುದ್ಧ ಬಂಡಾಯವೆದ್ದು, ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಕಳೆದ ಒಂದೂವರೆ ದಶಕದಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಸಕಲೇಶಪುರದ ಬಾಳುಪೇಟೆಯಲ್ಲಿ ಇಂದು ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.