ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ ನಿಧನ

valmiki nayak
Published on

ಕಲಬುರಗಿ: ಚಿತ್ತಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಾಲ್ಮೀಕಿ ನಾಯಕ ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿ ನಿಧನರಾದರು.

ಇಂದು ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿದ್ದ ವಾಲ್ಮೀಕಿ ನಾಯಕ ಅವರು ವಾಡಿ ಗ್ರಾಮದಲ್ಲಿ ವಾಕಿಂಗ್ ಮಾಡಿದ್ದರು. ಬಳಿಕ ಎದೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆಯೇ ಮೃತಪಟ್ಟರು. ವಾಲ್ಮಿಕಿ ನಾಯಕ ಅವರಿಗೆ 68 ವರ್ಷ ವಯಸ್ಸಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net