

ಕಾರವಾರ; ಮಾಜಿ ಸಂಸದ ಅನಂತ ಕುಮಾರ್ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಅವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
(ಏಜೆನ್ಸೀಸ್)
ಈ ಹಿಂದೆ ಅಪರಿಚಿತ ವ್ಯಕ್ತಿಯೋರ್ವ ಅನಂತ ಕಮಾರ್ ಹೆಗಡೆ ಅವರಿಗೆ ತಡರಾತ್ರಿ 2 ಗಂಟೆ ಸುಮಾರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು.
ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ ಅನುಮತಿ ಮೇರೆಗೆ ಇಂದು (18) ದೂರು ದಾಖಲಿಸಲಾಗಿದ್ದು, ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.