ಮಾಜಿ ಪ್ರಧಾನಿ Manmohan Singh ಆಸ್ಪತ್ರೆಗೆ ದಾಖಲು

Manmohan Singh
Published on

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಅವರನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್​ ಸಿಂಗ್​ (Manmohan Singh) ಅವರಿಗೆ 92 ವರ್ಷ ವಯಸ್ಸಾಗಿದ್ದು, ಸದ್ಯ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸುದ್ದಿ ಮೂಲಗಳ ಪ್ರಕಾರ ಮನಮೋಹನ್​ ಸಿಂಗ್ (Manmohan Singh) ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ಕಾರಣ ಇನ್ನೂ ತಿಳಿದುಬಂದಿಲ್ಲ. 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮನಮೋಹನ್​ ಸಿಂಗ್​ ಅವರು ಈ ವರ್ಷದ ಏಪ್ರಿಲ್​ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.

1991ರಲ್ಲಿ ರಾಜಕೀಯ ಪ್ರವೇಶಿಸಿದ ಮನಮೋಹನ್​ ಸಿಂಗ್​ ಅವರು ಪಿವಿ ನರಸಿಂಹ ರಾವ್​ ಅವರ ಸಚಿವ ಸಂಪುಟದಲ್ಲಿ  ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net