

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪ್ರತಿಭಾ ಪಾಟೀಲ್ (89) ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪಾಟೀಲ್ ಅವರು ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆಯಾಗಿದ್ದಾರೆ. ಅವರು 2007 ರಿಂದ 2012 ರವರೆಗೆ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದರು.
1962ರಲ್ಲಿ ಪ್ರತಿಭಾ ಪಾಟೀಲ್ ಅವರು ಜಲಗಾಂವ್ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆತ್ಕೆಯಾದರು. ಕಳೆದ ವರ್ಷ ಫೆಬ್ರವರಿಯಲ್ಲಿ ಅವರ ಪತಿ ದೇವಿ ಸಿಂಗ್ ಶೇಖಾವತ್ ಅವರು 89ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು.