ವಿವಿಧ ಇಲಾಖೆ ಸಿಬ್ಬಂದಿಗೆ ಪರೀಕ್ಷೆ

meeting
ಇಲಾಖಾ ಪರೀಕ್ಷೆಗಳ ಕುರಿತು ಬಸವರಾಜ್ ಪೂರ್ವ ಸಿದ್ಧತಾ ಸಭೆಯಲ್ಲಿ ಮಾಹಿತಿ ನೀಡಿರು. ಡಾ. ನಟರಾಜ್, ಶಿವಕುಮಾರ್ ಇದ್ದರು.
Published on

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗದಿಂದ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ಜಿಲ್ಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಜೂ.7ರಿಂದ 23ರವರೆಗೆ ಇಲಾಖಾ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಚಾರ್ಯ ಬಸವರಾಜ್ ಮಾಹಿತಿ ನೀಡಿದರು.

ಕರ್ನಾಟಕ ಲೋಕಸೇವಾ ಆಯೋಗದಿಂದ 2024ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವೇಳಾಪಟ್ಟಿ ಹಾಗೂ ಸಮಯ ಪ್ರತಿ ಪತ್ರಿಕೆಗೂ ಬೇರೆಯದೇ ಆಗಿರುತ್ತದೆ ಎಂದರು.
ಜೂ.7-9, 11-14, 16-17, 19-23ರವರೆಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆ ಮೇಲ್ವಿಚಾರಣೆಗಾಗಿ ಇಬ್ಬರು ವೀಕ್ಷಕರನ್ನು, ಮಾರ್ಗಾಧಿಕಾರಿಗಳನ್ನು, ಸ್ಥಳೀಯ ನಿರೀಕ್ಷಣಾಧಿಕಾರಿ ಸೇರಿ ಅಗತ್ಯ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಕೆಪಿಎಸ್‌ಸಿ ನಿಯಮಾನುಸಾರ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಯ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ ಎಂದು ಹೇಳಿದರು.
ಪರೀಕ್ಷಾ ಕೊಠಡಿಯೊಳಕ್ಕೆ ಮೊಬೈಲ್, ಸ್ಮಾರ್ಟ್ ವಾಚ್ ಹಾಗೂ ಇತರೆ ಡಿಜಿಟಲ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ. ಭದ್ರತೆಗೆ ಪೋಲಿಸ್ ಹಾಗೂ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು. ಡಿಸಿ ಕಚೇರಿ ಸಹಾಯಕ ಶಿವಕುಮಾರ್, ಡಿಎಚ್‌ಒ ಡಾ. ನಟರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net