ಪರೀಕ್ಷೆಗಳ ಪಾರದರ್ಶಕತೆ ಕಾಯ್ದುಕೊಳ್ಳಲು ಆಗ್ರಹ

Oplus_131072
Oplus_131072
Published on

ರಾಣೆಬೆನ್ನೂರ: ಕಾನೂನು ಪದವಿ ಪರೀಕ್ಷೆಗಳನ್ನು ಪಾರದರ್ಶಕತೆಯಿಂದ ನಡೆಸಲು ಒತ್ತಾಯಿಸಿ, ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಮರು ಪರೀಕ್ಷೆಯ ಫಲಿತಾಂಶ ಕೂಡಲೇ ಬಿಡುಗಡೆ ಮಾಡುವುದು ಸೇರಿ ಕಾನೂನು ವಿದ್ಯಾಥಿರ್ಗಳ ವಿವಿಧ ಬೇಡಿಕೆಗಳನ್ನು ಪರಿಹರಿಸಲು ಆಗ್ರಹಿಸಿ ಭಾರತ ವಿದ್ಯಾಥಿರ್ ಫೆಡರೇಷನ್​ (ಎಸ್​ಎಫ್​ಐ) ಜಿಲ್ಲಾ ಕಾನೂನು ಘಟಕ ನೇತೃತ್ವದಲ್ಲಿ ವಿದ್ಯಾಥಿರ್ಗಳು ಇಲ್ಲಿಯ ಕಾನೂನು ಮಹಾವಿದ್ಯಾಲಯ ಪ್ರಾಂಶುಪಾಲ ಬಿ. ರಮೇಶ ಮೂಲಕ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ. ಬಸವರಾಜು ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಸಂಟನೆಯ ಜಿಲ್ಲಾಧ್ಯಕ್ಷ ಬಸವರಾಜ ಎಸ್​. ಮಾತನಾಡಿ, ಮೂರು ವರ್ಷದ ಕಾನೂನು ಪದವಿ ವಿಷಯಗಳಲ್ಲಿ 1ನೇ ಸೆಮಿಸ್ಟರ್​ ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಬೇಕು. ಈ ಹಿಂದೆ ನಡೆದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ನಕಲು ಮಾಡಿರುವುದರಿಂದ ನ್ಯಾಯಾಲಯ ಮರುಪರೀಕ್ಷೆ ನಡೆಸಲು ಆದೇಶಿಸಿದೆ. ರಾಜ್ಯ ಕಾನೂನು ವಿಶ್ವವಿದ್ಯಾಲಯ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಿ, ಈ ವಿಚಾರದಲ್ಲಿ ಕಟ್ಟುನಿಟ್ಟಾದ ಕ್ರಮತೆಗೆದುಕೊಳ್ಳಬೇಕು. ಪ್ರಶ್ನೆ ಪತ್ರಿಕೆ ನಕಲು ಮಾಡಿದ ತಪ್ಪಿತಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು.

ಬಹುತೇಕ ಪರೀಕ್ಷೆ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳ ಕಣ್ಗಾವಲು ಇದ್ದು, ಅಧಿಕಾರಿಗಳು ಹಣದ ಆಸೆಗೆ ಒಳಗಾಗಿ ಪ್ರಶ್ನೆ ಪತ್ರಿಕೆ ನಕಲು ಮಾಡಿರುವುದು ನಾಚಿಕೆಗೆಡಿನ ಸಂಗತಿ. ಈ ಪ್ರಕರಣ ಬೆಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿಗಳು ವಿಶ್ವವಿದ್ಯಾಲಯದ ನಿಯಮಗಳಿಗೆ ಕಟ್ಟುಬದ್ಧರಾಗಿ ಕಾರ್ಯನಿರ್ವಹಿಸಬೇಕು.

ಯಾರೋ ಮಾಡಿದ ತಪ್ಪಿಗೆ ನ್ಯಾಯಯುತವಾಗಿ ಪರೀಕ್ಷೆ ಬರೆದ ಬಹುತೇಕ ಅಮಾಯಕ ವಿದ್ಯಾಥಿರ್ಗಳಿಗೆ ಭಾರಿ ಅನ್ಯಾಯವಾಗಲಿದೆ. ಆದ್ದರಿಂದ ಈ ಬಾರಿ ಮರು ಪರೀಕ್ಷೆ ಬರೆಯುತ್ತಿರುವ ನೂರಾರು ವಿದ್ಯಾಥಿರ್ಗಳ ಕಾನೂನು ಶಿಕ್ಷಣಕ್ಕೆ ಯಾವುದೇ ತೊಂದರೆ, ಅಡಚಣೆ ಆಗದಂತೆ ತಡೆಯಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ದುರುಗಪ್ಪ ನಪೂರಿ, ಸುನೀಲ ಕುರುಬರ, ಹನುಮಂತ ಹರಿಜನ, ಕಾಂತೇಶ ಮಠದ, ಅಜೇಯ ಕೊಡ್ಲೆರ, ಕಿರಣ ತುಮ್ಮಿನಕಟ್ಟಿ, ಅರುಣ ಎಚ್​., ರಾಹುಲ್​ ಮಡಿವಾಳರ, ಪ್ರಸನ್ನಗೌಡ ಹಲಸೂರ, ಬಸವರಾಜ ಹಾವೇರಿ, ಆಸಂಗಿ ವಡ್ಡರ, ಅರುಣ ಕುಮಾರ ತಿಪ್ಪಣ್ಣನವರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net