ಪರೀಕ್ಷೆಗಳು ಮುಂದೂಡಿಕೆ!

EXAM
Published on

ಬೆಂಗಳೂರು: ಕರೊನಾದಿಂದ ಶೈಕ್ಷಣಿಕ ವರ್ಷ ಆರಂಭ ಅನಿಶ್ಚಿತತೆಯಿಂದ ಕೂಡಿರುವುದರಿಂದ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಗಳು ನಡೆಯುವುದು ಕಷ್ಟ.

ಪ್ರತಿ ವರ್ಷ ಏಪ್ರಿಲ್ ಅಥವಾ ಮಾರ್ಚ್ ಅವಧಿಯಲ್ಲಿ ಎರಡು ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ, ಈ ಆಕ್ಟೋಬರ್ ಬಂದರೂ ಶಾಲಾ-ಕಾಲೇಜು ಆರಂಭವಾಗದೇ ಇರುವುದರಿಂದ ಪರೀಕ್ಷೆ ಮುಂದೂಡುವ ಸಾಧ್ಯತೆ ಇದೆ.

ಪರೀಕ್ಷೆ ಆರು ತಿಂಗಳು ಇರುವಾಗಲೇ ಸಿದ್ಧತೆ ಆರಂಭವಾಗುತ್ತಿತ್ತು. ಆದರೆ, ಈ ಬಾರಿ ಶಾಲಾ-ಕಾಲೇಜು ಆರಂಭವಾಗಲಿ ಎಂದು ಪರೀಕ್ಷಾ ಮಂಡಳಿಗಳು ಕಾಯುತ್ತಿರುವುದರಿಂದ ಸಿದ್ಧತೆಗಳು ನಡೆಯುತ್ತಿಲ್ಲ. ಈಗಾಗಲೇ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಶೇ.30 ಪಠ್ಯಕ್ರಮವನ್ನು ಕಡಿತ ಮಾಡಿ ಸರ್ಕಾರದ ಅನುಮತಿಗಾಗಿ ಕಳುಹಿಸಿದೆ. ಆದರೆ, ಈವರೆಗೂ ಅನುಮತಿ ಸಿಕ್ಕಿಲ್ಲ. ಈ ರೀತಿ ವಿಳಂಬವಾಗುತ್ತಿರುವುದರಿಂದ ಪರೀಕ್ಷೆಗಳನ್ನು ನಿಗದಿತ ಅವಧಿಗಿಂತ ಮುಂದೂಡುವುದು ಅನಿವಾರ್ಯವಾಗಲಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net