ಸರ್ಕಾರದಲ್ಲಿ ಮಿತಿಮೀರಿದ ಭ್ರಷ್ಟಚಾರ: ಜೆಡಿಎಸ್ ಆರೋಪ

jds
ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್‌ನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆ.ಬಿ.ಪ್ರಸನ್ನಕುಮಾರ್, ದೀಪಕ್ ಸಿಂಗ್, ಕಡಿದಾಳ್ ಗೋಪಾಲ್, ಗೀತಾ ಸತೀಶ್, ಕಾಂತ್‌ರಾಜ್ ಸೋಮಿನಕೊಪ್ಪ, ನರಸಿಂಹ ಗಂಧದಮನೆ, ಬೊಮ್ಮನಕಟ್ಟೆ ಮಂಜುನಾಥ್ ಮತ್ತಿತರರು ಪಾಲ್ಗೊಂಡಿದ್ದರು.
Published on

ಶಿವಮೊಗ್ಗ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರಂಭದಿಂದಲೂ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿ ಶಿವಮೊಗ್ಗ ನಗರ ಜೆಡಿಎಸ್ ಘಟಕದಿಂದ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಜೆಡಿಎಸ್ ಜಿಲ್ಲಾ ಕಾರ್ಯಾಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಎಎ ವೃತ್ತ, ನೆಹರು ರಸ್ತೆ, ಸೀನಪ್ಪ ಶೆಟ್ಟಿ ವೃತ್ತ, ಮಹಾವೀರ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿತು. ಪ್ರತಿಭಟನೆ ನಡೆಸಿದ ಜೆಡಿಎಸ್ ಪ್ರಮುಖರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಎಲ್ಲ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ ಹೆಚ್ಚುತ್ತಿದೆ. ಸ್ವಜನಪಕ್ಷಪಾತ ತುಂಬಿತುಳುಕುತ್ತಿದೆ. ಪಕ್ಷದ ಹಿರಿಯ ಶಾಸಕರು ಹಾಗೂ ಮುಖಂಡರು, ರಾಜ್ಯ ಸರ್ಕಾರ ಮತ್ತು ಸಚಿವರು ವಿರುದ್ಧ ಬಹಿರಂಗವಾಗಿ ಸಾಕ್ಷಿಸಮೇತ ದಾಖಲೆಗಳೊಂದಿಗೆ ಆರೋಪ ಮಾಡುತ್ತಿದ್ದಾರೆ. ಇದು ಸರ್ಕಾರದ ಕಾರ್ಯವೈಖರಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್, ನಗರಾಧ್ಯಕ್ಷ ದೀಪಕ್ ಸಿಂಗ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ಎಚ್.ಎಂ.ಸಂಗಯ್ಯ, ಅಬ್ದುಲ್ ವಾಜೀದ್, ತ್ಯಾಗರಾಜ್, ದಾದಾಪೀರ್, ಮಧು ಕುಮಾರ್, ಕಾಂತ್‌ರಾಜ್ ಸೋಮಿನಕೊಪ್ಪ, ನರಸಿಂಹ ಗಂಧದಮನೆ, ಮಹೇಶ್, ರಮೇಶ್ ನಾಯ್ಕ, ಬೊಮ್ಮನಕಟ್ಟೆ ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net