ಅತಿಯಾಗಿ ಮೊಬೈಲ್ ಬಳಕೆ ಸಲ್ಲ

dvs
ಕುವೆಂಪು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಡಿವಿಎಸ್ ಸಾರಂಗ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಯಟ್ ಉಪನ್ಯಾಸಕಿ ಕೆ.ವಿ.ಜ್ಯೋತಿಕುಮಾರಿ ಅವರನ್ನು ಸನ್ಮಾನಿಸಲಾಯಿತು. ಎಸ್.ರಾಜಶೇಖರ್, ಎಸ್.ಪಿ.ದಿನೇಶ್, ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಇತರರಿದ್ದರು.
Published on

ಶಿವಮೊಗ್ಗ: ವಿದ್ಯಾರ್ಥಿಗಳು ಮೊಬೈಲ್ ಮತ್ತಿತರ ಆಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಮನಬಂದಂತೆ ಬಳಸಬಾರದು. ಅದರಲ್ಲಿನ ಧನಾತ್ಮಕ ಅಂಶಗಳನ್ನು ಮಾತ್ರ ಬಳಸಿಕೊಳ್ಳಬೇಕು ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕಿ ಕೆ.ವಿ.ಜ್ಯೋತಿಕುಮಾರಿ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯುಎಸಿ ಘಟಕದಿಂದ ಸೋಮವಾರ ಏರ್ಪಡಿಸಿದ್ದ ಕುವೆಂಪು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಡಿವಿಎಸ್ ಸಾರಂಗ್-2024 ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್‌ಗೆ ದಾಸರಾಗುತ್ತಿದ್ದು, ಇದಕ್ಕಾಗಿ ಹೆಚ್ಚು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಕಲಿಕೆ ದೃಷ್ಟಿಯಿಂದ ಮಾತ್ರ ಮೊಬೈಲ್ ಬಳಸಬೇಕು ಎಂದರು.
ಡಿವಿಎಸ್ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಭಾರತ ಅತ್ಯಂತ ಶ್ರೇಷ್ಠ ಸಾಂಸ್ಕೃತಿಕ ಪರಂಪರೆ ಹೊಂದಿದೆ. ಯುವಜನತೆ ದೇಶದ ಐತಿಹಾಸಿಕ ಸಂಗತಿ ಹಾಗೂ ಶ್ರೀಮಂತಿಕೆಯನ್ನು ಅರಿತುಕೊಳ್ಳಬೇಕು. ಸದೃಢ ಭಾರತ ನಿರ್ಮಿಸುವಲ್ಲಿ ಯುವ ಜನರ ಪಾತ್ರ ಪ್ರಮುಖ ಎಂದು ಹೇಳಿದರು.
ಡಿವಿಎಸ್ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಛಾಯಾಗ್ರಾಹಕ ಶಿವಮೊಗ್ಗ ನಂದನ್, ಐಕ್ಯುಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net