ಚುನಾವಣೆ ಬಂತೆಂದರೆ ಸಾಕು, ಹುಟ್ಟುಹಬ್ಬವೂ ಉತ್ಸವವೇ!..

WhatsApp Image 2022-10-26 at 11.49.14 AM
Published on

ಬೆಳಗಾವಿ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಗಡಿಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಫುಲ್​ ಆ್ಯಕ್ಟಿವ್ ಆಗಿದ್ದಾರೆ.

ಚುನಾವಣೆ ಹೊಸ್ತಿಲಲ್ಲೇ ಇರುವಾಗ ಅದ್ಧೂರಿ ಜನ್ಮದಿನ ಆಚರಿಸಿಕೊಳ್ಳಲು ವಿನಯ ಕುಲಕರ್ಣಿ ಭರ್ಜರಿ ತಯಾರಿ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕಿತ್ತೂರು ಪಟ್ಟಣದಲ್ಲಿ ಜನ್ಮದಿನ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿವೆ.

ಹಿಂದೆ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪಕ್ಕದ ಕಿತ್ತೂರಿನಲ್ಲಿ ಕಾರ್ಯಕ್ರಮ ಆಯೋಜನೆಗೆ ನಿರ್ಧರಿಸಲಾಗಿದೆ.

ನವೆಂಬರ್ 7 ರಂದು ತಮ್ಮ ಜನ್ಮದಿನದ ನಿಮಿತ್ತ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಬೆಂಬಲಿಗರ ಜೊತೆ ಕಿತ್ತೂರು ಹೊರವಲಯದಲ್ಲಿ ವಿನಯ್ ಕುಲಕರ್ಣಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿನಯ ಕುಲಕರ್ಣಿಗೆ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿ ಧಾರವಾಡ ಕೈ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಜನ್ಮದಿನದ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರು ಭಾಗಿ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಹೊರಗಿದ್ದುಕೊಂಡೇ ಚುನಾವಣೆ ಅಖಾಡ ಸಜ್ಜುಗೊಳಿಸಲು ವಿನಯ್ ಕುಲಕರ್ಣಿ ತಯಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net