ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಿ: ಎಡಿಜಿಪಿ

police
ಉತ್ತಮವಾಗಿ ಕಾರ್ಯನಿರ್ವಹಿಸಿದ ಸಿಬ್ಬಂದಿಗೆ ಎಡಿಜಿಪಿ ಆರ್.ಹಿತೇಂದ್ರ ಪ್ರಶಂಸನಾ ಪತ್ರ ನೀಡಿದರು. ತ್ಯಾಗರಾಜನ್ ಉಪಸ್ಥಿತರಿದ್ದರು.
Published on

ಶಿವಮೊಗ್ಗ: ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಡಿಎಆರ್ ಮೈದಾನದಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿದರು. ಬಳಿಕ ಪೊಲೀಸ್ ವಾಹನಗಳ ಪರಿವೀಕ್ಷಣೆ ನಡೆಸಿದರು.

ಎರಡು ದಿನಗಳ ಶಿವಮೊಗ್ಗ ಭೇಟಿಗೆ ಆಗಮಿಸಿರುವ ಅವರು, ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ತನಿಖಾ ಹಂತದಲ್ಲಿರುವ ಪ್ರಕರಣಗಳನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ಸೂಚಿಸಿದರು. ರೌಡಿಶೀಟರ್‌ಗಳ ಮೇಲೆ ನಿಗಾ ವಹಿಸಬೇಕು. ಸಮಾಜಕ್ಕೆ ಮಾರಕವಾಗುವ ವ್ಯಕ್ತಿಗಳ ವಿರುದ್ಧ ಗಡಿಪಾರು, ಗೂಂಡಾ ಕಾಯ್ದೆ ಪ್ರಯೋಗದ ಬಗ್ಗೆಯೂ ಪರಿಶೀಲಿಸಬೇಕೆಂದು ತಿಳಿಸಿದರು.
ಸಂಘಟಿತ ಅಪರಾಧಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಮಾರಾಟ ಹಾಗೂ ಬಳಕೆ ವಿರುದ್ಧ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಬೇಕು. ಆ ಮೂಲಕ ಮಾದಕ ವಸ್ತುಗಳ ಜಾಲವನ್ನು ನಿಯಂತ್ರಿಸಬೇಕೆಂದು ಹೇಳಿದರು.
ಪೂರ್ವ ವಲಯ ಐಜಿಪಿ ತ್ಯಾಗರಾಜನ್, ಎಸ್ಪಿ ಜಿ.ಕೆ. ಮಿಥುನ್‌ಕುಮಾರ್, ಎಎಸ್ಪಿ ಅನಿಲ್‌ಕುಮಾರ್ ಭೂಮರಡ್ಡಿ, ಎ.ಜಿ.ಕಾರಿಯಪ್ಪ, ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲರಾಜ್, ಎಂ.ಸುರೇಶ್, ಗೋಪಾಲಕೃಷ್ಣ ಟಿ.ನಾಯಕ್, ನಾಗರಾಜ್, ಶಿವಾನಂದ ಮದರಖಂಡಿ, ಸತೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net