ಕಲ್ಲು ಕ್ವಾರಿಯಲ್ಲಿ ಭೀಕರ ಸ್ಫೋಟ; ಹಲವರು ಮೃತಪಟ್ಟಿರುವ ಶಂಕೆ

Blast
Published on

ಚೆನ್ನೈ: ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಅನೇಕ ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕ್ವಾರಿ ಕೆಲಸಕ್ಕಾಗಿ ಸ್ಫೋಟಕಗಳನ್ನು ಒಂದು ಕೊಠಡಿಯಲ್ಲಿ ಶೇಖರಿಸಲಾಗಿತ್ತು. ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸಲಾಗುತ್ತಿದೆ.

ಓವರ್​ಲೋಡ್​ ಟ್ರಕ್​ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳದಿರುವ ಬಗ್ಗೆ ಅನೇಕ ದಿನಗಳಿಂದ ದೂರುಗಳು ಬರುತ್ತಿದ್ದವು. ಸ್ಫೋಟದ ಮೊದಲು ಕ್ವಾರಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಘಟನೆ ಹಿನ್ನೆಲೆಯಲ್ಲಿ ಕಲ್ಲು ಕ್ವಾರಿ ಶಾಶ್ವತವಾಗಿ ಮುಚ್ಚುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net