

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ.
ವರ್ಗಾವಣೆ ಬಯಸಿದ ಪೊಲೀಸ್ ಸಿಬ್ಬಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿ, ಮೇ 20 ಕಡೆಯ ದಿನವೆಂದು ನಿಗದಿಮಾಡಲಾಗಿತ್ತು. ಆಡಳಿತಾತ್ಮಕ ಕಾರಣಗಳಿಂದ ತಿರಸ್ಕೃತಗೊಂಡ ಸಿಬ್ಬಂದಿ ವರ್ಗಾವಣೆ ಬಯಸಿದ್ದಲ್ಲಿ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕಾಲಮಿತಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ.
ಪರಿಷ್ಕೃತವಾಗಿ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ.