

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ(Extension of the purchase period of Green gram) ಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(Shivanand patil) ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನ.21ಕ್ಕೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18 ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್ ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20,450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇದರ ಪ್ರಯೋಜನ ಪಡೆಯಬೇಕು ಎಂದು ಶಿವಾನಂದ ಪಾಟೀಲ ಮನವಿ ಮಾಡಿದ್ದಾರೆ.