

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜು.15ರವರೆಗೆ ವಿಸ್ತರಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿ, ವರ್ಗಾವಣೆಗೆ ಕಾತರಿಸಿರುವ ನೌಕರರು ನೆಮ್ಮದಿಯಿಂದ ನಿಟ್ಟುಸಿರು ಬಿಡುವಂತೆ ಮಾಡಿದೆ.
ಪ್ರಸಕ್ತ ವರ್ಷ (2024-25)ದ ಸಾರ್ವತ್ರಿಕ ವರ್ಗಾವಣೆಯನ್ನು ಕೈಗೊಳ್ಳಲು ಆಯಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿದ್ದ ಅವಧಿಯನ್ನು ಜು.9ರಿಂದ 15ರವರೆಗೆ ವಿಸ್ತರಿಸಲಾಗಿದೆ. ಈ ಮುಂಚೆ ಹೊರಡಿಸಿದ ಆದೇಶದಲ್ಲಿ ವಿವರಿಸಿದ್ದ ಷರತ್ತಿಗೆ ಒಳಪಡಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ.