ಸ್ವಿಗ್ಗಿ ಡೆಲಿವರಿ ಬಾಯ್‌ನ ಹಣ ಸುಲಿಗೆ

Crime Logo
Published on

ಬೆಂಗಳೂರು: ಸ್ವಿಗ್ಗಿ ಡೆಲಿವರಿ ಬಾಯ್‌ನನ್ನು ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿರುವ ಪ್ರಕರಣ ವಿವೇಕಾನಂದಾ ನಗರದಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಆರ್ಡರ್ ಮಾಡಿದ್ದ ಊಟ ಕೊಟ್ಟು, ವಾಪಸ್ ವಿವೇಕಾನಂದ ನಗರದ ಬಳಿ ಹೋಗುತ್ತಿದ್ದ. ಆಗ ಡಿಯೋ ಬೈಕ್‌ನಲ್ಲಿ ಬಂದ ಮೂವರು ಆರೋಪಿಗಳು, ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ, ಊಟದ ಬಾಕ್ಸ್, ೧ ಸಾವಿರ ರೂ. ನಗದು, ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರೊಬ್ಬರು ಘಟನೆಯನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಹೀಗಾಗಿ ಪುಲಕೇಶಿನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಡೆಲಿವರಿ ಬಾಯ್ ಅನ್ನು ಸಂಪರ್ಕಿಸಿ, ದೂರು ನೀಡುವಂತೆ ಹೇಳಿದ್ದಾರೆ. ಆದರೆ, ಆತ ದೂರು ನೀಡಿಲ್ಲ. ಆದರೂ ಸಾರ್ವಜನಿಕವಾಗಿ ಸುಲಿಗೆ ಮಾಡಿರುವ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net