ಮೀನುಗಾರರ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ

suvarana tribuja
Published on

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಸುವರ್ಣ ತ್ರಿಭುಜ ಬೋಟ್‌ನಲ್ಲಿ ತೆರಳಿ ನಾಪತ್ತೆಯಾಗಿದ್ದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹೆಚ್ಚುವರಿ ಪರಿಹಾರದ ಚೆಕ್ಕನ್ನು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಶನಿವಾರ ವಿಶ್ವ ಮೀನುಗಾರಿಕೆ ದಿನಾಚರಣೆ ಕಾರ್ಯಕ್ರಮದಲ್ಲಿ ವಿತರಿಸಿದರು.

2018ರ ಡಿಸೆಂಬರ್ ತಿಂಗಳಲ್ಲಿ ಬೋಟ್ ನಾಪತ್ತೆಯಾಗಿತ್ತು. ಮೀನುಗಾರರ ಕುಟುಂಬದಲ್ಲಿ ಅವಲಂಬಿತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ.ನೀಡುವಂತೆ ಶಾಸಕ ಕೆ.ರಘುಪತಿ ಭಟ್ ಸಿಎಂಗೆ ಮನವಿ ಸಲ್ಲಿಸಿದ್ದರು.

ಕಾರ್ಯಕ್ರಮದಲ್ಲಿ ಮತ್ಸ್ಯ ಸಂಪದ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳನ್ನು ಬಿಡುಗಡೆ ಮಾಡಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಂದಾಯ ಸಚಿವ ಆರ್.ಅಶೋಕ್, ಶಾಸಕ ಕುಮಾರ್ ಬಂಗಾರಪ್ಪ ಮೊದಲದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net