ಒಗ್ಗೂಡಿದರೆ ಸೌಲಭ್ಯ ಲಭ್ಯ

HLK VISHWAKARMA 17
Published on

ಹೊಳಲ್ಕೆರೆ: ವಿಶ್ವಕರ್ಮ ಸಮಾಜ ಎಲ್ಲಿಯವರೆಗೆ ಸಂಘಟನೆ ಆಗುವುದಿಲ್ಲವೋ ಅಲ್ಲಿಯವರೆಗೆ ಸರ್ಕಾರದ ಸೌಲಭ್ಯಗಳು ದೊರೆಯುವುದಿಲ್ಲ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ತಾಲೂಕು ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಅನಾದಿ ಕಾಲದಿಂದಲೂ ಯಾರಿಗೂ ಅನ್ಯಾಯ ಮಾಡದೆ ಶ್ರಮದಲ್ಲಿ ಬದುಕು ಕಟ್ಟಿಕೊಂಡ ಸಮುದಾಯ ವಿಶ್ವಕರ್ಮ. ಆದರೆ, ಸೌಲಭ್ಯ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಆದ್ದರಿಂದ ಸಂಘಟನೆ ಮೂಲಕ ತಮ್ಮ ಹಕ್ಕುಗಳನ್ನು ಈಡೇರಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಆರ್.ಅಶೋಕ್, ಮಹೇಶಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net