

ಬೆಂಗಳೂರು: ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದ್ದರೆ ಮಸೀದಿ ಧ್ವನಿವರ್ಧಕ ತೆರವುಗೊಳಿಸಬೇಕು ಎಂಬ ಸುತ್ತೋಲೆ ಹೊರಡಿಸಿದ್ದ ಪೊಲೀಸ್ ಇಲಾಖೆ ಇದೀಗ ತನ್ನದೇ ಸುತ್ತೋಲೆಯ ಫ್ಯಾಕ್ಟ್ಚೆಕ್ ಪ್ರಕಟಿಸಿದೆ! ಡಿಜಿಪಿ ಪರವಾಗಿ ಎಐಜಿಪಿ ಸುತ್ತೋಲೆ ಹೊರಡಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆಯಾದರೂ. ಅದನ್ನು ಗುಮಾಸ್ತರು ಮಾಡಿದ್ದಾರೆ ಎಂಬ ಸಮಜಾಯಿಷಿಯನ್ನೂ ಇಲಾಖೆ ನೀಡಿದೆ!!!!!
ಪೊಲೀಸ್ ಇಲಾಖೆಯ ಫ್ಯಾಕ್ಟ್ಚೆಕ್ ಹೇಳಿದ್ದಿಷ್ಟು- ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕ ಗಳನ್ನು ತೆಗಿಯುಲು ಉದ್ದೇಶಿಸಿರುವ ಬಗ್ಗೆ Dg&Igp ರವರು ಹೊರಡಿಸಿದ್ದೆಂದು ಹೇಳಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ನಿಜ ಸಂಗತಿ : ಈ ಬಗ್ಗೆ ಪರಿಶೀಲಿಸಿದಾಗ ತಿಳಿದು ಬಂದಿದ್ದೇನೆಂದರೆ , ಈ ಪತ್ರವನ್ನು ಹಿರಿಯ ಅಧಿಕಾರಿಗಳ ಒಪ್ಪಿಗೆ ಇಲ್ಲದೆ ಗುಮಾಸ್ತರು ಕಿಡಿಗೇಡಿತನದಿಂದ ಕರ್ನಾಟಕ ರಾಜ್ಯದ ಪೊಲೀಸ್ ಕಮಿಷನರಗಳು ಹಾಗೂ ಜಿಲ್ಲಾ sp ಗಳಿಗೆ ಕಳುಹಿಸಿರತ್ತಾರೆ. ಆದರೆ ಈ ರೀತಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಸೀದಿಗಳಲ್ಲಿರುವ ಧ್ವನಿ ವರ್ಧಕಗಳನ್ನು ತೆಗೆಯುವಂತ ಯಾವುದೇ ನಿರ್ದೇಶನವನ್ನು ಪೊಲೀಸ್ ಇಲಾಖೆಯಿಂದ ನೀಡಿರುವುದಿಲ್ಲ. ಈ ಬಗ್ಗೆ ಮುಂದಿನ ವಿಚಾರಣೆಗೆ ಆದೇಶಿಸಲಾಗಿದೆ ಸಾರ್ವಜನಿಕರು ಇಂತಹ ಗಾಳಿಸುದ್ದಿ ಅಥವಾ ಹಾದಿತಪ್ಪಿಸುವಂತಹ ಸುದ್ದಿಗಳಿಗೆ ಗಮನ ಕೊಡದಂತೆ ಸೂಚಿಸಲಾಗಿದೆ.