ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ| kempegowda-airport

Bengaluru Airport
Published on

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೇ ವಾರದಲ್ಲಿ ಎರಡನೇ ಬಾರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆಯನ್ನು ಕಳುಹಿಸಲಾಗಿದೆ. ಶೌಚಾಲಯದ ಪೈಪ್‌ಲೈನ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಲಾಗಿದ್ದು, ಪರಿಶೀಲನೆ ನಡೆಸಿದ ನಂತರ ಇವು ಹುಸಿ ಬೆದರಿಕೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಬುಧವಾರ (18) ರಾತ್ರಿ ಭಯೋತ್ಪಾದಕರ ಹೆಸರಿನಲ್ಲಿ ಕಳುಹಿಸಲಾದ ಇಮೇಲ್‌ನಲ್ಲಿ ಎರಡು ಬಾಂಬ್‌ಗಳನ್ನು ಇಟ್ಟಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಒಂದು "ಪ್ಲಾನ್ ಎ" ನ ಭಾಗವಾಗಿ ಮತ್ತು ಮೊದಲನೆಯದು ವಿಫಲವಾದರೆ "ಪ್ಲಾನ್ ಬಿ" ಅಡಿಯಲ್ಲಿ ಬ್ಯಾಕಪ್ ಇದೆ ಎಂದು ಬೆದರಿಕೆ ಹಾಕಲಾಗಿದೆ.

ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಹುಸಿ ಬಾಂಬ್ ಬೆದರಿಕೆ ಬಂದ ನಂತರ ಪ್ರಕರಣ ದಾಖಲಿಸಿಕೊಂಡು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತೀವ್ರ ಭದ್ರತಾ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡನೇ ಬಾರಿ ಹುಸಿ ಬಾಂಬ್​ ಬೆದರಿಕೆ

(ಏಜೆನ್ಸೀಸ್)

ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್​ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್​ ಬೆದರಿಕೆ ಇ-ಮೇಲ್ ಬಂದಿತ್ತು. ನಗರದಲ್ಲಿ ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ಹುಸಿ ಬಾಂಬ್ ಮೇಲ್​ಗಳು ಮತ್ತೆ ಆಕ್ಟೀವ್​ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಮತ್ತೊಂದು ಹುಸಿ ಬಾಂಬ್​ ಮೇಲ್​ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net