

ಬೆಂಗಳೂರು: ನಿವೃತ್ತ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಹಣ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಬೆಂಗಳೂರು ಸೈಬರ್ ಕ್ರೈಂ ಠಾಣೆ ಹಾಗೂ ನೆರೆ ಜಿಲ್ಲೆಗಳ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾತಾಣದಲ್ಲಿರುವ ಜ್ಯೋತಿ ಪ್ರಕಾಶ್ ಮಿರ್ಜಿ ಅವರ ಪೋಟೋ ಬಳಸಿಕೊಂಡು ಅವರ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದಿರುವ ಕಿಡಿಗೇಡಿಗಳು, ಅವರ ಸ್ನೇಹಿತರು ಹಾಗೂ ಸಂಬಂಧಿಕರಿಗೆ ತುರ್ತು ಸಂದರ್ಭದ ನೆಪವೊಡ್ಡಿ ಹಣ ವಸೂಲಿ ಮಾಡಿದ್ದಾರೆ. ಅಂದಾಜು ಇದುವರೆಗೂ ೩೦ ಸಾವಿರ ರೂ. ವಸೂಲಿ ಮಾಡಿರುವ ಮಾಹಿತಿ ಇದೆ. ಆದರಿಂದ ಸಾರ್ವಜನಿಕರು ನಕಲಿ ಫೇಸ್‌ಬುಕ್ ಖಾತೆ ಮೂಲಕ ಹಣದ ಬೇಡಿಕೆ ಇಟ್ಟರೇ ನೀಡಬಾರದು. ಕಿಡಿಗೇಡಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸೈಬರ್ ಕ್ರೈಂ ಠಾಣೆ ಪೊಲೀಸರು ತಿಳಿಸಿದ್ದಾರೆ.