ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ಬ್ಯಾಂಕ್‌ವೊಂದರ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಸಿಬ್ಬಂದಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
೨೦೧೪೧೫ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ೬೨.೭೭ ಕೋಟಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿ ಐದು ಕಡೆ ದಾಳಿ ನಡೆಸಿದ್ದಾರೆ. ಈ ಅಕ್ರಮ ನಡೆದಾಗ ಬ್ಯಾಂಕ್‌ನ ಹಾಲಿ ಅಧ್ಯಕ್ಷ ಮಂಜುನಾಥಗೌಡ ಅವರೇ ಆಗಲೂ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದಿದ್ದರು.