ನಕಲಿ ಐಡಿ ಕಾರ್ಡ್, ಆರೋಪಿ ಸೆರೆ

KSD_Arrest
Published on

ಬೆಂಗಳೂರು: ಮುಖ್ಯಮಂತ್ರಿಗಳ ಸಚಿವಾಲಯದ ಆಪ್ತ ಕಾರ್ಯದರ್ಶಿ ಎಂಬ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ಹೊಂದಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್ ಬಂಧಿತ. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಪ್ತ ಸಹಾಯಕನಾಗಿ ನಕಲಿ ಐಡಿ ಕಾರ್ಡ್ ಮಾಡಿಸಿಕೊಂಡಿದ್ದ. ಇದನ್ನು ಅಮಾಯಕರಿಗೆ ತೋರಿಸಿ ಸರ್ಕಾರದಿಂದ ಕೆಲಸ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಲು ಪ್ರಯತ್ನಿಸಿದ್ದ.

ಈ ಬಗ್ಗೆ ಖಚಿತ ಮಾಹಿತಿ ತಿಳಿದ ಮುಖ್ಯಮಂತ್ರಿ ಕಚೇರಿ ಅಧಿಕಾರಿ, ವಿಧಾನಸೌಧ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಇದರ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net