ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Published on

ಪುತ್ತೂರು: ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ ವಂಚಿಸಿ ಬಂಧನ ಭೀತಿಯಲ್ಲಿರುವ ಶ್ರೀಕೃಷ್ಣ ಜೆ.ರಾವ್ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಜುಲೈ ೩ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಪೊಲೀಸ್ ಇಲಾಖೆ ಬಂಧನಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ವಿವಿಧ ತಂಡಗಳು ರಾಜ್ಯದ ವಿವಿಧ ಕಡೆಗೆ ತೆರಳಿ ಆರೋಪಿ ಪತ್ತೆಗೆ ಶೋಧ ಕೈಗೊಂಡಿದೆ. ಜೂನ್ ೨೭ರಂದು ಯುವಕನ ತಂದೆ ನಗರಸಭಾ ಸದಸ್ಯ ಲೋ ಬಿಪಿ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದರ ಹಿಂದೆ ಬಂಧನ ಭೀತಿಯಿದೆ ಎಂದು ಹೇಳಲಾಗಿದೆ. ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ಪೊಲೀಸ್ ಅಧಿಕಾರಿಗಳ ತಂಡ ತೆರಳಿ ಚಿಕಿತ್ಸೆ ಮಾಹಿತಿ ಪಡೆದುಕೊಂಡಿದ್ದಾರೆನ್ನಲಾಗಿದೆ. ಆಸ್ಪತ್ರೆಯ ವಾರ್ಡ್‌ನಲ್ಲಿ ಡ್ರಿಪ್ಸ್ ಹಾಕಿ ಮಲಗಿಸಿದ್ದು, ಆರೋಗ್ಯ ಸ್ಥಿರವಾಗಿದ್ದರೆ ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ ಎಂಬುದು ಖಚಿತ ಮೂಲಗಳಿಂದ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net