Flight Bomb Threat : ಮುಂಬೈನಿಂದ ಹೊರಟ 3 ವಿಮಾನಗಳಿಗೆ ಬಾಂಬ್ ಬೆದರಿಕೆ! ತುರ್ತು ಭೂಸ್ಪರ್ಶ

flight
ಸಾಂದರ್ಭಿಕ ಚಿತ್ರ
Published on

ನವದೆಹಲಿ: ಮುಂಬೈನಿಂದ ಹೊರಟಿದ್ದ ಮೂರು ವಿಮಾನಗಳಿಗೆ ಪ್ರತ್ಯೇಕ ಬಾಂಬ್ ಬೆದರಿಕೆಗಳು ( Flight Bomb Threat) ಬಂದವು. ಮುಂಬೈನಿಂದ (Mumbai) ನ್ಯೂಯಾರ್ಕ್‌ಗೆ (New York) ಹೊರಟಿದ್ದ ಏರ್ ಇಂಡಿಯಾ ವಿಮಾನ (Air India Flight), ಮುಂಬೈನಿಂದ ಓಮನ್‌ನ ಮಸ್ಕತ್‌ಗೆ ಮತ್ತು ಸೌದಿ ಅರೇಬಿಯಾದ ಜೆಡ್ಡಾಕ್ಕೆ ಹೋಗುತಿದ್ದ ಮತ್ತೊಂದು ಇಂಡಿಗೋ ವಿಮಾನಕ್ಕೆ (IndiGo Flight) ಬಾಂಬ್ ಬೆದರಿಕೆ ಬಂದಿತ್ತು.

ಎಕ್ಸ್‌ನಲ್ಲಿನ ಪೋಸ್ಟ್ ಮೂಲಕ ಬಾಂಬ್ ಬೆದರಿಕೆಯನ್ನು ಸ್ವೀಕರಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ದೆಹಲಿಯ ಭದ್ರತಾ ಏಜೆನ್ಸಿಗಳಿಗೆ ಸಂದೇಶವನ್ನು ರವಾನಿಸಲಾಗಿದೆ. ವಿಮಾನಕ್ಕೆ ಬಾಂಬ್‌ ಬೆದರಿಕೆ ( Flight Bomb Threat ) ಬಂದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿಮಾನವನ್ನು  ತುರ್ತು ಭೂಸ್ಪರ್ಶ ಮಾಡಲಾಗಿದೆ.

ಫ್ಲೈಟ್ AI 119 ಮುಂಬೈನಿಂದ ನ್ಯೂಯಾರ್ಕ್‌ನ JFK ವಿಮಾನ ನಿಲ್ದಾಣಕ್ಕೆ 2 ಗಂಟೆಗೆ ಹೊರಟಿತು. ಈ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ವಿಮಾನವನ್ನು ತಕ್ಷಣವೇ ದೆಹಲಿಗೆ ತಿರುಗಿಸಲಾಯಿತು. ವಿಮಾನವು ಪ್ರಸ್ತುತ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದೆ.

ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವಿಮಾನವನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಭೂಸ್ಪರ್ಶ ಮಾಡಲಾಯಿತು. ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಬ್ ಬೆದರಿಕೆಯ ಕುರಿತು ಸಕ್ರಿಯವಾಗಿ ತನಿಖೆ ನಡೆಸಲಾಗುತ್ತಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆಗೆ ದೆಹಲಿ ಪೊಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದಾರೆ. ಸುಳ್ಳು ಮಾಹಿತಿ ಹರಡುವುದನ್ನು ತಡೆಯಲು ಸಾರ್ವಜನಿಕರು ಸಹಕರಿಸುವಂತೆ ವಿಮಾನಯಾನ ಸಂಸ್ಥೆ ಮನವಿ ಮಾಡಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ  ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net