ಹುಡುಗರೊಂದಿಗೆ ಚಾಟ್ ಮಾಡಿದ್ದಕ್ಕೆ ಹೆಣ್ಣು ಮಕ್ಕಳಿಗೆ ಮನಸೋಇಚ್ಛೆ ಥಳಿಸಿದ ಕುಟುಂಬ! ವಿಡಿಯೋ ವೈರಲ್

girls
Published on

ಭೋಪಾಲ್: ಹುಡುಗರೊಂದಿಗೆ ಚಾಟ್ ಮಾಡುತ್ತಾರೆ ಎನ್ನುವ ಒಂದೇ ಕಾರಣಕ್ಕೆ ಇಬ್ಬರು ಯುವತಿಯರಿಗೆ ಕೋಲಿನಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿ ದೆ. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶದ ಧರ್ ಜಿಲ್ಲೆಯ ಪಿಪಲ್ವ ಗ್ರಾಮದಲ್ಲಿ ಇಂತದ್ದೊಂದು ಅಮಾನವೀಯ ಘಟನೆ ನಡೆದಿದೆ. ಬುಡಕಟ್ಟು ಜನಾಂಗಕ್ಕೆ ಸೇರಿರುವ ಇಬ್ಬರು ಯುವತಿಯರು ಅವರ ಸಂಬಂಧಿಕ ಯುವಕರಿಗೆ ಮೆಸೇಜ್ ಮಾಡುತ್ತಿದ್ದರಂತೆ. ಮೆಸೇಜ್ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಅವರ ಯುವತಿಯರ ಸಂಬಂಧಿಗಳು ಅವರಿಗೆ ಥಳಿಸಿದ್ದಾರೆ. ಕೋಲಿನಿಂದ ಹೊಡೆದು, ಜುಟ್ಟು ಹಿಡಿದು ಎಳೆದಾಡಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಸುಮಾರು ಒಂದು ತಿಂಗಳ ಹಿಂದೆ ನಡೆದಿದ್ದ ಈ ಘಟನೆ ಪೊಲೀಸರ ಗಮನಕ್ಕೂ ಬಂದಿದ್ದು, ಕ್ರಮಕ್ಕೆ ಮುಂದಾದ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೋ ನೋಡಿ ಅದರಲ್ಲಿ ಆರೋಪಿಗಳನ್ನು ಗುರುತಿಸಿ ಕ್ರಮ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net