ದರ್ಶನ್ ಭೇಟಿ ಮಾಡಿದ ಕುಟುಂಬಸ್ಥರು

Darshan
Published on

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿರತಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್‌ರನ್ನು ಸೋಮವಾರ ಕುಟುಂಬಸ್ಥರು ಭೇಟಿ ಮಾಡಿದ್ದರು.

ಬೆಳಗ್ಗೆಯೇ ದರ್ಶನ್ ತಾಯಿ ಮೀನಾ ತೂಗುದೀಪ್, ಸಹೋದರ ದಿನಕರ್ ತೂಗುದೀಪ್, ಪತ್ನಿ ವಿಜಯಲಕ್ಷ್ಮೀ ಮತ್ತು ಪುತ್ರ ವಿನೀಶ್ ಒಟ್ಟಿಗೆ ಹೋಗಿ ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಭೇಟಿ ಮಾಡಿದ್ದರು. ಕುಟುಂಬಸ್ಥರನ್ನು ನೋಡುತ್ತಿದ್ದಂತೆ ದರ್ಶನ್ ಭಾವುಕರಾಗಿ ಪುತ್ರನನ್ನು ಅಪ್ಪಿಕೊಂಡು ಮುದಾಡಿದ್ದರು. ತಾಯಿ ಮೀನಾ ಕೂಡ ಕಣ್ಣೀರು ಹಾಕಿದ್ದಾರೆ. ತಾಯಿಗೆ ದರ್ಶನ್ ಸಮಾಧಾನ ಹೇಳಿದ್ದಾರೆ.

ತಂದೆ-ಮಗನ ಸ್ಥಿತಿ ಕಂಡು ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಹ ಭಾವುಕರಾಗಿದ್ದಾರೆ. ದರ್ಶನ್‌ಗೆ ಸಹೋದರ ದಿನಕರ್ ತೂಗುದೀಪ್ ಧೈರ್ಯ ತುಂಬಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡಿದ್ದಾರೆ. ಕಳೆದ ಹತ್ತು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ದರ್ಶನ್, ಹಲವು ನಟ, ನಟಿಯರು ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಬಂಧೀಖಾನೆ ಇಲಾಖೆ ಕಾನೂನನ್ನು ಗಾಳಿಗೆ ತೂರಿ ದರ್ಶನ್‌ಗೆ ರಾಜಾತಿಥ್ಯ ನೀಡಿದೆ. ಸಾಮಾನ್ಯರು ಜೈಲಿಗೆ ಬಂದರೆ ಕೊಡಬೇಕಾದರೆ ಹತ್ತಾರು ರೂಲ್ಸ್ ಹೇಳುತ್ತಾರೆ. ಅದೇ ದರ್ಶನ್ ಕುಟುಂಬಕ್ಕೆ ಮಾತ್ರ ನಿಯಮ ಇಲ್ಲವೇ ಎಂಬ ಆರೋಪಗಳು ಕೇಳಿಬಂದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net