ಮಲಯಾಳಂನ ಖ್ಯಾತ ನಟ ಶವವಾಗಿ ಪತ್ತೆ! | Malayalam Actor

Untitled design - 2025-08-02T100631.384
Published on

Malayalam Actor : ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ (51) ಅವರು ಶುಕ್ರವಾರ ಸಂಜೆ ಕೊಚ್ಚಿಯ ಚೊಟ್ಟನಿಕ್ಕಾರದಲ್ಲಿರುವ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ವರದಿಗಳ ಪ್ರಕಾರ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದಿದ್ದ ಕಲಾಭವನ್ ನವಾಸ್ ಅವರನ್ನು ಹೋಟೆಲ್ ಸಿಬ್ಬಂದಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಒಂದು ಚಿತ್ರದ ಚಿತ್ರೀಕರಣದ ಸಮಯದಲ್ಲಿ ಹೋಟೆಲ್‌ನಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

ಲಾಭವನ್ ನವಾಸ್ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕಲಾಭವನ್ ಅವರ ಮರಣೋತ್ತರ ಪರೀಕ್ಷೆಯನ್ನು ಶನಿವಾರ ಕಲಾಮಸ್ಸೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆಸಿ, ಸಾವಿಗೆ ಕಾರಣವನ್ನು ಖಚಿತಪಡಿಸಲಾಗುವುದು. ಬಳಿಕ ಶವವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net