

ತಮಿಳುನಾಡು: ತಮಿಳು ಚಿತ್ರರಂಗದ ಖ್ಯಾತ ನಟ ಸೂರ್ಯ ಅಭಿನಯದ ಬಹುನಿರೀಕ್ಷಿತ 'ಕಂಗುವ' ಚಿತ್ರದ ಬಗ್ಗೆ ಹೊಸ ಮಾಹಿತಿಯೊಂದು ದೊರಕಿದ್ದು, ಚಿತ್ರತಂಡ ರಿಲೀಸ್ ಮಾಡಿದ ಪೋಸ್ಟರ್‌ನಲ್ಲಿ ಸೂರ್ಯ ಅವರ ಮಾಸ್ ಲುಕ್ ನೋಡಿದ ಪ್ರೇಕ್ಷಕರು ಇದೀಗ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶೀಘ್ರವೇ ತೆರೆ ಕಾಣಲು ಸಜ್ಜಾಗಿರುವ 'ಕಂಗುವ' ಚಿತ್ರದಲ್ಲಿ ಸೂರ್ಯ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೀಸರ್ ಯಾವಾಗ ಬಿಡುಗಡೆಯಾಗಲಿದೆ ಎಂದು ಅಭಿಮಾನಿಗಳು ಭಾರೀ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಸದ್ಯ ಇನ್ನು ನಿರ್ಮಾಣ ಹಂತದಲ್ಲಿರುವ ಈ ಬಿಗ್ ಬಜೆಟ್ ಚಿತ್ರವನ್ನು ಸಿರುತೈ ಶಿವ ನಿರ್ದೇಶಿಸಿದ್ದಾರೆ.
ಜುಲೈ 23 ರಂದು 'ಕಂಗುವ' ಚಿತ್ರದ ಕಿರು ವಿಡಿಯೋ ಝಲಕ್ ರಿಲೀಸ್ ಮಾಡಲಿದ್ದೇವೆ ಎಂದು ಚಿತ್ರತಂಡ ಹೇಳಿದ್ದು, ಈ ಮಾಹಿತಿಯನ್ನು ಸೂರ್ಯ ಅವರ ಮಾಸ್ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಪೋಸ್ಟರ್‌ನಲ್ಲಿ "ದಿ ಮ್ಯಾನ್, ದಿ ವೈಲ್ಡ್, ದಿ ಸ್ಟೋರಿ" ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ಸದ್ಯದ ವರದಿ ಅನುಸಾರ ಚಿತ್ರದ ವಿಎಫ್‌ಎಕ್ಸ್ ಕೆಲಸಗಳು ಪ್ರಸ್ತುತ ಮುಂಬೈನಲ್ಲಿ ನಡೆಯುತ್ತಿವೆ.
ಸೂರ್ಯ ನಟನೆಯ ಕಂಗುವ ಚಿತ್ರದ ಬಗ್ಗೆ ಭಾರೀ ನಿರೀಕ್ಷೆಗಳು ಮೂಡಿದ್ದು, ಬಹು ಭಾಷೆಗಳಲ್ಲಿ ಮತ್ತು 3Dಯಲ್ಲಿ ಸಿನಿಮಾ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಸ್ಟುಡಿಯೋ ಗ್ರೀನ್, ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಾಣವಾಗಲಿರುವ ಕಂಗುವ ಚಿತ್ರವು ಮುಂದಿನ ವರ್ಷ ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ ಎಂದು ಹೇಳಲಾಗಿದೆ. ಚಿತ್ರದಲ್ಲಿ ಬಾಲಿವುಡ್ ಬೆಡಗಿ ದಿಶಾ ಪಟಾನಿ, ಸೂರ್ಯಗೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಒಟ್ಟಾರೆ ಸೂರ್ಯ ಅವರನ್ನು ಮತ್ತೊಮ್ಮೆ ಪರದೆಯ ಮೂಲಕ ಕಣ್ತುಂಬಿಕೊಳ್ಳಲು ಅವರ ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ,(ಏಜೆನ್ಸೀಸ್).