ನಟಿ ಕೃತಿ ಶೆಟ್ಟಿಯ ಹೊಸ ಲುಕ್​​ಗೆ ಫಿದಾ ಆದ ಫ್ಯಾನ್ಸ್​; ಇಲ್ಲಿವೆ ನೋಡಿ ಫೋಟೋಗಳು..

Untitled design (45)
Published on

ಆಂಧ್ರಪ್ರದೇಶ: ತೆಲುಗು ಚಿತ್ರರಂಗದ ಯುವ ನಟಿ ಕೃತಿ ಶೆಟ್ಟಿ ಇತ್ತೀಚೆಗೆ ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​ ಮಾಡಿದ ಫೋಟೋವೊಂದನ್ನು ನೋಡಿದ ಅವರ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.

ತೆಲುಗು ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕೃತಿ ಶೆಟ್ಟಿ, ಇತ್ತೀಚೆಗೆ ವಿಶೇಷ ಫೋಟೋಶೂಟ್ ಮಾಡಿಸಿದ್ದರು. ಈ ಚಿತ್ರಗಳನ್ನು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಈ ಸ್ಟಿಲ್‌ಗಳಲ್ಲಿ ಕೃತಿ ಅವರು ನೇರಳೆ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಛಾಯಾಚಿತ್ರಗಳನ್ನು ಕಣ್ತುಂಬಿಕೊಂಡ ಫ್ಯಾನ್ಸ್​ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

2021 ರಲ್ಲಿ ಬ್ಲಾಕ್‌ಬಸ್ಟರ್ ರೊಮ್ಯಾಂಟಿಕ್ ಚಿತ್ರ 'ಉಪ್ಪೆನಾ' ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ನಟಿ, ಇದೀಗ ಇನ್​​ಸ್ಟಾಗ್ರಾಮ್​​ನಲ್ಲಿ ಕೇವಲ 2 ವರ್ಷಗಳ ಅವಧಿಯಲ್ಲಿ ಬರೋಬ್ಬರಿ 6 ಮಿಲಿಯನ್​​ಗೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ತಮ್ಮ ಫೋಟೋಗೆ ಮೆಚ್ಚುಗೆ ತಿಳಿಸಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಕೃತಿ ಶೆಟ್ಟಿ, "ನನ್ನ ಸಿನಿ ಪಯಣದಲ್ಲಿ ತುಂಬು ಪ್ರೀತಿ ಮತ್ತು ಬೆಂಬಲ ನೀಡುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ" ಎಂದು ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net