ಸಿಖ್​ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಂಚಭೂತಗಳಲ್ಲಿ ಲೀನರಾದ Manmohan Singh

Manmohan Singh
Published on

ನವದೆಹಲಿ: ದೇಶ ಕಂಡ ಅಪ್ರತಿಮ ನಾಯಕ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ (Manmohan Singh) ಅವರ ನಿಧನಕ್ಕೆ ಇಡೀ ರಾಷ್ಟ್ರ ಕಂಬನಿ ಮಿಡಿದಿದ್ದು, ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ಅವರ ಅಂತ್ಯಕ್ರಿಯೆಯು ನವದೆಹಲಿಯ ನಿಗಮ್​ ಬೋಧ್​ ಘಾಟ್‌ನಲ್ಲಿ ನಡೆದಿದೆ.

ಅಂತ್ಯಕ್ರಿಯೆಗೂ ಮುನ್ನ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ನಿಗಮ್​ ಬೋಧ್​​ ಘಾಟ್​​ಗೆ ತೆಗೆದುಕೊಂಡು ಹೋಗಲಾಯಿತು. ಸಿಖ್​ ಸಮುದಾಯದ ವಿಧಿ ವಿಧಾನಗಳ ಪ್ರಕಾರ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಯಿತು.

ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್​ ಧನಕರ್​, ಕೇಂದ್ರ ಗೃಹ ಸಚಿವ ಅಮಿತ್​ ಷಾ, ರಾಜನಾಥ್​ ಸಿಂಗ್​, ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

ದೀರ್ಘಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರು ಡಿಸೆಂಬರ್​​ 26ರ ರಾತ್ರಿ 9:51ಕ್ಕೆ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ  ಕೊನೆಯುಸಿರೆಳೆದರು. ಮನಮೋಹನ್ ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು  ಮೂವರು ಪುತ್ರಿಯರನ್ನು ಅಗಲಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net