ರೈತರ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆದಿದೆ; ಸಚಿವ ಶಿವಾನಂದ

Shivanand Patil
Published on

ರಾಣೆಬೆನ್ನೂರ: ರೈತ ಆತ್ಮಹತ್ಯೆ ಪ್ರಕರಣಗಳನ್ನು ವಿವಾದ ಮಾಡುವುದು ಬೇಡ. ರೈತ ಆತ್ಮಹತ್ಯೆಯ ವರದಿ ಮಾಡುವಲ್ಲಿ ಏನೆಲ್ಲ ತಪ್ಪುಗಳು ಆಗುತ್ತಿವೆ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಇಲ್ಲಿಯ ಎಪಿಎಂಸಿ ಮೆಗಾ ಮಾರುಕಟ್ಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತ ಆತ್ಮಹತ್ಯೆ ಸಂಬಂಧ ಮುಖ್ಯಮಂತ್ರಿ ಅವರೂ ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.

ರೈತ ಆತ್ಮಹತ್ಯೆಯಲ್ಲಿ ಹಾವೇರಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆತ್ಮಹತ್ಯೆ ತಡೆಗಟ್ಟಲು ಏನು ಕ್ರಮ ಕೈಗೊಂಡಿದ್ದೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ, ಜಿಲ್ಲೆಯಲ್ಲಿ ಮೊದಲಿನಿಂದಲೂ ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ನನ್ನ ಉಸ್ತುವಾರಿಗೂ ಅದಕ್ಕೂ ಸಂಬಂಧ ಕಲ್ಪಿಸುವುದು ಬೇಡ. ವರದಿ ಮಾಡುವಂತೆ ಏನೆಲ್ಲ ತಪ್ಪುಗಳು ನಡೆಯುತ್ತಿವೆ ಎಂಬುದಕ್ಕೆ ಮೂರ್ನಾಲ್ಕು ಪ್ರಕರಣಗಳು ಕಣ್ಮುಂದಿವೆ. ಇದನ್ನು ಇಟ್ಟುಕೊಂಡೇ, ವರದಿ ವ್ಯವಸ್ಥೆಯಲ್ಲಿ ಏನಾದರೂ ಬದಲಾವಣೆ ಮಾಡುವ ಬಗ್ಗೆ ಪರಿಶೀಲನೆ ನಡೆದಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net