ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘದ ತೀರ್ಮಾನ

raita sangha
Published on

ಶಿವಮೊಗ್ಗ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಡಿ.13ರಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ಗೌರವಾಧ್ಯಕ್ಷ ನಿಸರಾಣಿ ಮಂಜುನಾಥ ಗೌಡ ಹೇಳಿದರು.

ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಮಾತನ್ನು ಮರೆತಿದೆ. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿಲ್ಲ. ಕಾಡಂಚಿನಲ್ಲಿ ಉಳುಮೆ ಮಾಡುತ್ತಿದ್ದ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಸುಮಾರು 10 ಲಕ್ಷ ರೈತರು ಕೃಷಿ ಭೂಮಿಯಿಂದ ದೂರವುಳಿದಿದ್ದಾರೆ. ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಬೇಕು. ವರ್ಷವಿಡೀ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯಬೇಕು. 10 ಸಾವಿರ ಕೋಟಿ ರೂ. ಆವರ್ತನಿಧಿ ಸ್ಥಾಪಿಸಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು ಎಂಬುದು ನಮ್ಮ ಬೇಡಿಕೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಮಂಜಪ್ಪ ಹರೇಕೊಪ್ಪ, ಪ್ರಮುಖರಾದ ಎಚ್.ಪಿ.ಸತೀಶ್, ಎನ್.ಜೆ.ಮಂಜುನಾಥ್, ಚಿದಂಬರಂ, ರೇಣುಕಾಂಬ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net