ಮೆಕ್ಕೆಜೋಳಕ್ಕೆ 3 ಸಾವಿರ ರೂ. ಬೆಂಬಲ ಬೆಲೆ ನೀಡಲು ಆಗ್ರಹ

10-RNR-03
Published on

ರಾಣೆಬೆನ್ನೂರ: ಮೆಕ್ಕೆಜೋಳ ಬೆಳೆಗೆ ಪ್ರತಿ ಕ್ವಿಂಟಾಲ್​ಗೆ 3 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕಿನ ಹುಲಿಹಳ್ಳಿ ಬಳಿ ಎಪಿಎಂಸಿ ಮೇಗಾ ಮಾರುಕಟ್ಟೆ ಎದುರು ಪ್ರತಿಭಟನೆ ನಡೆಸಿದರು.

ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಮೆಕ್ಕೆಜೋಳ ಬೆಳೆಯುವ ರೈತರಿಗೆ ಪ್ರತಿವರ್ಷ ಸರಿಯಾದ ಬೆಲೆ ಸಿಗುತ್ತಿಲ್ಲ. ಇದರಿಂದಾಗಿ ಪ್ರತಿವರ್ಷ ಸಂಕಷ್ಟದಲ್ಲಿಯೇ ಸಿಲುಕಿ ಸಾಲಬಾಧೆಯಿಂದ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ಮೆಕ್ಕಜೋಳಕ್ಕೆ ಪ್ರತಿ ಕ್ವಿಂಟಾಲ್​ಗೆ 3 ಸಾವಿರ ರೂ. ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.

ಇಲ್ಲಿಯ ಎಪಿಎಂಸಿಯಲ್ಲಿ ಪ್ರತಿ ಕ್ವಿಂಟಾಲ್​ಗೆ 1700 ರೂ.ನಿಂದ 1950 ರೂ. ವರೆಗೆ ಇ&ಟೆಂಡರ್​ ಮೂಲಕ ಮೆಕ್ಕೆಜೋಳ ಖರೀದಿ ಮಾಡುತ್ತಿದ್ದಾರೆ. ಇದರಿಂದ ರೈತರಿಗೆ ಮೋಸವಾಗುತ್ತಿದೆ. ಕೂಡಲೆ ಸರ್ಕಾರವು ಪ್ರತಿ ಕ್ವಿಂಟಾಲ್​ಗೆ 3 ಸಾವಿರ ರೂ. ಬೆಂಬಲ ಬೆಲೆಯನ್ನಾಗಿ ನೀಡಬೇಕು.

ಇ&ಟೆಂಡರ್​ ಪ್ರಕ್ರಿಯೆ ಮಧ್ಯಾಹ್ನ 3ರಿಂದ ಸಂಜೆ 5.30 ರವರೆಗೆ ನಡೆಯುತ್ತಿದ್ದು, ತೂಕದ ಪ್ರಕ್ರಿಯೆ ರಾತ್ರಿ 9ರಿಂದ 11 ಗಂಟೆಯವರೆಗೆ ಆಗುತ್ತಿದೆ. ಇದರಿಂದ ರೈತರು ಗ್ರಾಮಗಳಿಗೆ ತೆರಳಲು ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಇ&ಟೆಂಡರ್​ ಪ್ರಕ್ರಿಯೆಯನ್ನು ಬೆಳಗ್ಗೆ 11 ಗಂಟೆಗೆ ಮುಗಿಸಿದರೆ ರೈತರಿಗೆ ಅನುಕೂಲವಾಗಲಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ರೈತರ ಮೆಕ್ಕೆಜೋಳ, ಉಳ್ಳಾಗಡ್ಡಿ, ಬೆಳ್ಳುಳ್ಳಿ ಹಾಗೂ ಭತ್ತ ಸೇರಿ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಇಲ್ಲವಾದರೆ ನ. 14ರಂದು ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಸ್ಥಳಕ್ಕೆ ಬಂದ ತಹಸೀಲ್ದಾರ್​ ಆರ್​.ಎಚ್​. ಭಾಗವಾನ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರಮುಖರಾದ ಹನುಮಂತಪ್ಪ ದೀವಗಿಹಳ್ಳಿ, ಮಹೇಶ ಕೊಟ್ಟೂರ, ರಾಜಶೇಖರ ದೂದಿಹಳ್ಳಿ, ಮಂಜುನಾಥ ಸಂಬೋಜಿ, ರಾಜೇಶ ಅಂಗಡಿ, ಬಸವರಾಜ ಮೇಗಳಗೇರಿ, ಲಲಿತಾ ಲಮಾಣಿ, ಶೈಲಮ್ಮ ಅರಳಗೇರಿ, ನೀಲಮ್ಮ ಮೇಗಳಗೇರಿ, ಕೊಟ್ಟರಮ್ಮ ಕಾಯಕದ, ಅಮೀದಾಬಾನಿ ಶಿಡೇನೂರ, ನಾಗಮ್ಮ ತಳವಾಯಿ, ಮಹದೇವಪ್ಪ ಬಣಕಾರ, ಚಂದ್ರಶೇಖರ ಪಾಟೀಲ, ನಿಂಗಪ್ಪ ಸತ್ಯಪ್ಪನವರ, ಪರಸಪ್ಪ ಚಿತ್ತಣ್ಣನವರ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net