

ರಾಣೆಬೆನ್ನೂರ: ತಾಲೂಕಿನಲ್ಲಿ ಹಾಯ್ದು ಹೋಗಿರುವ ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡ ಜಮೀನುಗಳ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಸ್ವಾಧೀನ ಪಡಿಸಿಕೊಂಡ ಜಮೀನುಗಳ ಕೆಲ ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಆದ್ದರಿಂದ ಅಧಿಕಾರಿಗಳಿಗೆ ಸೂಚಿಸಿ ಸಮಸ್ಯೆ ಬಗೆಹರಿಸಬೇಕು.
ತಾಲೂಕಿನ ರಾಹುತನಕಟ್ಟಿ ಗ್ರಾಮದಲ್ಲಿ 1947ರಲ್ಲಿ ರೈತರಿಗೆ ಉಳಿಮೆ ಮಾಡಲು ಕೊಟ್ಟ 15 ಎಕರೆ ಭೂಮಿಯನ್ನು 2005ರಲ್ಲಿ ಅರಣ್ಯ ಇಲಾಖೆಯವರು ತಮ್ಮ ಹೆಸರು ಸೇರಿಸಿಕೊಂಡು ವಾಪಸ್ ಪಡೆದಿದ್ದಾರೆ. ಆದ್ದರಿಂದ ಈ ಬಗ್ಗೆ ಪರಿಶೀಲಿಸಿ ರೈತರಿಗೆ ಮರಳಿ ಭೂಮಿ ಒದಗಿಸಿಕೊಡಬೇಕು ಎಂದರು.
ಸಿದ್ದಪ್ಪ ಚಳಗೇರಿ, ಹೊನ್ನಪ್ಪ ತಳವಾರ, ಶಿವಾನಂದಪ್ಪ ಗೊರಕ್ಕಳವರ, ಪರಮೇಶಪ್ಪ ಹಲಗೇರಿ ಮತ್ತಿತರರು ಇದ್ದರು.