

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ರೈತ, ಕಾರ್ಮಿಕ, ಕಾಂಗ್ರೆಸ್, ಜೆಡಿಎಸ್, ಮಹಿಳಾ ಸಂಘ, ಡಿವೈಎಫ್ಐ ಸೇರಿದಂತೆ ಹಲವು ಸಂಘಟನೆಗಳು ಬೀದಿಗಳಿದು ಪ್ರತಿಭಟನೆ ನಡೆಸಿವೆ.
ಚಾಮರಾಜನಗರದಲ್ಲಿ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆಗಿಳಿದ ರೈತ, ಕಾರ್ಮಿಕ ಹಾಗೂ ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿಯ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು. ಬಳ್ಳಾರಿಯಲ್ಲಿ ವಿವಿಧ ರೈತಪರ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಶವಯಾತ್ರೆ ಮಾಡುವ ಮೂಲಕ ಅಣುಕಿಸಿದರು. ಶವಗಳ ಆಕೃತಿ ಮುಂದೆ ಬಿಕ್ಕಿ-ಬಿಕ್ಕಿ ಅತ್ತು ವ್ಯಂಗ್ಯವಾಡಿದರು. ರೈತರ ಮರಣ ಶಾಸನದಂತಿರೋ ಕಾಯ್ದೆಯನ್ನು ಅನುಷ್ಠಾನಕ್ಕೆ ತರಬೇಡಿ ಎಂದು ಆಗ್ರಹಿಸಿದರು. ಸರ್ಕಾರದ ವಿರುದ್ಧ ಸಿಡಿದೆದ್ದ ರೈತರು… ಮಳೆಯಲ್ಲೇ ಬೃಹತ್ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನ ಕರ್ನಾಟಕದ ಗಡಿ ಗೋಪುರದ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಟಾಳ್ ನಾಗರಾಜ್, ಸಾರಾಗೋವಿಂದು, ಮಂಜುನಾಥ ದೇವು ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು. ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆ ಕಾವು ತುಸು ಹೆಚ್ಚಾಗಿದೆ.