ರೈತರ ಬಗ್ಗೆ ಹಗುರ ಮಾತು ಆಡಿ ವಿವಾದ ಮೈಮೇಲೆ ಎಳೆದುಕೊಂಡ ಸಚಿವ

BC Patil
Published on

ಕೊಡಗು: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ತನ್ನ ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಹೇಡಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ಹೇಳಿದ್ದಾರೆ.

ಪೊನ್ನಂಪೇಟೆ ಅರಣ್ಯ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೃಷಿ ಮಾಡಿ ಉತ್ತಮ‌ ಜೀವನ ನಡೆಸುತ್ತಿರುವ ರೈತರಿದ್ದಾರೆ. ಇಂತಹವರ ನಡುವೆ ಕೆಲ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎನ್ನುತ್ತಾ ಹೇಡಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದರು.

ಇದ್ದು ಈಸಬೇಕು, ಈಸಿ ಜಯಿಸಬೇಕು. ಹೇಡಿ ಕೆಲಸಕ್ಕೆ ರೈತರು ಮುಂದಾಗಬಾರದು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಸಚಿವರು ಹೇಳಿದರು.

ಆದರೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರನ್ನು ಹೇಡಿಗಳು ಎಂಬ ಹೇಳಿಕೆ ವಿವಾದ ಸೃಷ್ಟಿಸಿದ್ದು, ಬಹುತೇಕರು ಈಗಾಗಲೇ ಕೃಷಿ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ರೈತರ ಬಗ್ಗೆ ಕೀಳಾಗಿ ಮಾತನಾಡಿರುವ ಬಿ.ಸಿ. ಪಾಟೀಲ್ ಮನೆ ಎದುರು ಉಗ್ರ ಹೋರಾಟ ನಡೆಸಲಾಗುವುದು. ಕೂಡಲೇ ರಾಜ್ಯದ ರೈತರ ಕ್ಷಮೆ ಕೇಳಬೇಕು. ಇಲ್ಲಾವದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ. ಸಚಿವರಿಗೆ ಅಧಿಕಾರದ ಮದ ನೆತ್ತಿಗೆ ಏರಿದೆ ಅದನ್ನು ನಾವು ಬಿಡಿಸುತ್ತೇವೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net