ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 7 ತಿಂಗಳ ಮಗು ಸೇರಿ ನಾಲ್ವರು ಸಜೀವ ದಹನ

fire accident
Published on

ದ್ವಾರಕ: ಗುಜರಾತ್​ನ ದ್ವಾರಕಾದಲ್ಲಿ ಭೀಕರ ಅಗ್ನಿ ದುರುಂತ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಏಳು ತಿಂಗಳ ಮಗು, ಗಂಡ, ಹೆಂಡತಿ, ಅಜ್ಜಿ ಸೇರಿದಂತೆ ನಾಲ್ವರು ಸಜೀವ ದಹನವಾಗಿದ್ದಾರೆ.

ಬೆಳಗಿನ ಜಾವ 3 ರಿಂದ 4 ಗಂಟೆ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿದೆ. ಏಕಾಏಕಿ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿದ್ದರಿಂದ ಮನೆಯಲ್ಲಿದ್ದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಮೃತರನ್ನು ಪವನ್ ಕಮಲೇಶ್ ಉಪಾಧ್ಯಾಯ (30), ಭಾವನಾ ಉಪಾಧ್ಯಾಯ (27), ಧ್ಯಾನಾ ಉಪಾಧ್ಯಾಯ (7) ಮತ್ತು ಪವನ್ ಅವರ ತಾಯಿ ಭಾಮಿನಿಬೆನ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಹೊರಬರಬೇಕಾಗಿದೆ.

ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net