

ದಕ್ಷಿಣ ಮೆಕ್ಸಿಕೋ: ( road accident ) 48 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು 40 ಜನರು ಸಜೀವ ದಹನವಾದರು. ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊದಲ್ಲಿ ಅಪಘಾತ ಸಂಭವಿಸಿದೆ.
ಬಸ್ಸಿನಲ್ಲಿ ಸಂಭವಿಸಿದ ಬೆಂಕಿಯಲ್ಲಿ 38 ಪ್ರಯಾಣಿಕರು ಮತ್ತು ಇಬ್ಬರು ಚಾಲಕರು ಸಾವನ್ನಪ್ಪಿದರು. ಅಪಘಾತದ ಕಾರಣಗಳ ಬಗ್ಗೆ ಸಂಪೂರ್ಣ ತನಿಖೆ ಆರಂಭಿಸಲಾಗಿದೆ.
ಅಧಿಕಾರಿಗಳ ಪ್ರಕಾರ, ಈ ಘಟನೆ ಶನಿವಾರ ಬೆಳಗಿನ ಜಾವ ತಬಾಸ್ಕೊದಲ್ಲಿ ಸಂಭವಿಸಿದೆ. ಬಸ್ ಬೆಂಕಿಗೆ ಆಹುತಿಯಾದಾಗ, 38 ಪ್ರಯಾಣಿಕರು ಮತ್ತು ಇಬ್ಬರು ಚಾಲಕರು ಪ್ರಾಣ ಕಳೆದುಕೊಂಡರು. ಘಟನೆಯಲ್ಲಿ ಟ್ರಕ್ ಚಾಲಕ ಕೂಡ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳದಲ್ಲಿ ಇದುವರೆಗೆ 18 ಜನರ ಅವಶೇಷಗಳನ್ನು ಗುರುತಿಸಲಾಗಿದೆ. ಗಾಯಾಳುಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಾವು- ನೋವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.
ಮೃತದೇಹದ ಅವಶೇಷಗಳನ್ನು ಪತ್ತೆ ಹೆಚ್ಚುವ ಕಾರ್ಯ ಮುಂದುವರೆದಿವೆ . ಅಪಘಾತದ ಕಾರಣಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ತಿಳಿದುಬಂದಿದೆ.