

ರಾಯಚೂರು: ವಿದ್ಯುತ್ ತಂತಿ ತಗುಲಿ ತಂದೆ ಮತ್ತು ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ದಿನ್ನಿ ಗ್ರಾಮದಲ್ಲಿ ನಡೆದಿದೆ.
ಮಹೇಶ ಆನಂದಪ್ಪ (46), ವಿನೋದ್ ಮಹೇಶ್(16) ಮೃತಪಟ್ಟವರಾಗಿದ್ದಾರೆ. ನಿನ್ನೆ ಸಂಜೆ ವೇಳೆ ಮನೆಗೆ ವಿದ್ಯುತ್ ಸಮಸ್ಯೆ ಉಂಟಾಗಿದೆ. ಆಗ ಮಹೇಶ್ ಏನಾಗಿದೆ ನೋಡಲು ತೆರಳಿದ್ದಾರೆ. ಮನೆಗೆ ಸಂಪರ್ಕಿಸಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ವಿದ್ಯತ್ ಪ್ರವಹಿಸಿ ಮೃತಪಟ್ಟಿದ್ದಾರೆ. ನಂತರ ತಂದೆಗೆ ಏನಾಯಿತೆಂದು ನೋಡಲು ಹೋಗಿದ್ದ ಮಗನಿಗೂ ವಿದ್ಯುತ್ ತಗುಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ಕುರಿತು ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. (ದಿಗ್ವಿಜಯ ನ್ಯೂಸ್)