ಇಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ| Suicide

ವಿಜಯವಾಣಿ (16)
Published on

Konaseema: ಆಂಧ್ರಪ್ರದೇಶದ ಅಂಬೇಡ್ಕರ್ ಕೋನಸೀಮಾ ಜಿಲ್ಲೆಯಲ್ಲಿ 35 ವರ್ಷದ ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ನೀಡಿ, ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ ಎಂದು ಬುಧವಾರ(ಅ. 15) ವರದಿಯಾಗಿದೆ.

ಪಿ.ಕಾಮರಾಜು ಎಂದು ಮಕ್ಕಳಿಗೆ ವಿಷ ನೀಡಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ನೇಣು ಬಿಗಿದುಕೊಳ್ಳುವ ಮೊದಲು ತನ್ನ ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 

ಈ ಕುರಿತು ಮಾತನಾಡಿರುವ ಎಸ್​ಪಿ ರಾಹುಲ್ ಮೀನಾ, ಮೃತಪಟ್ಟ ವ್ಯಕ್ತಿಗೆ ಕೆಲ ವ್ಯಕ್ತಿಗಳು ಕಿರುಕುಳ ನೀಡುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿ ಬಂದಿದೆ. ಆರು ವರ್ಷಗಳ ಹಿಂದೆ ಅವರ ಪತ್ನಿ ಕೂಡ ಕೆಲವು ವಿವಾದಗಳ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net