

ಚಿಕ್ಕಮಗಳೂರು: ಕಣ್ಣಿಗೆ ಕಾಣುವ ದೇವರು ಎಂದರೆ ತಂದೆ-ತಾಯಿ. ಇಂತಹ ಹೆತ್ತಪ್ಪನನ್ನೇ ಮಗನೊಬ್ಬ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕಡೂರು ತಾಲೂಕಿನ ಮಾಚಗೊಂಡನಹಳ್ಳಿ ಗ್ರಾಮದ ತಮ್ಮಣ್ಣ (66) ಮೃತ ದುರ್ದೈವಿ. ಟ್ರ್ಯಾಕ್ಟರ್ ಸಾಲ ಕಟ್ಟದ ಹಿನ್ನೆಲೆಯಲ್ಲಿ ಇವರ ಮನೆಗೆ ಬ್ಯಾಂಕ್ ಸಿಬ್ಬಂದಿ ಬಂದಿದ್ದರು. ಸಾಲದ ಬಗ್ಗೆ ಮಗ ಸತೀಶನನ್ನು ತಮ್ಮಣ್ಣ ಪ್ರಶ್ನಿಸಿದ್ದೇ ತಡ, ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗಿದೆ. ಇದನ್ನೂ ಓದಿರಿ ಪರಸ್ತ್ರೀ ಜತೆ ಮೂರು ಮಕ್ಕಳ ತಂದೆಗೆ ಲವ್ವಿಡವ್ವಿ! ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದವರ ಕಥೆ ಏನಾಯ್ತು?
ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಸಿಟ್ಟಿಗೆದ್ದ ಮಗ ಸತೀಶ ಅಪ್ಪನ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದಾನೆ. ತಲೆ ನಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾಗಿ ಸ್ಥಳದಲ್ಲೇ ತಮ್ಮಣ್ಣ ಮೃತಪಟ್ಟಿದ್ದಾರೆ. ಮನೆ ಆವರಣದಲ್ಲೇ ತಮ್ಮಣ್ಣರ ಭೀಕರ ಹತ್ಯೆಯ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಅಪ್ಪ-ಮಗನ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಸಖರಾಯಪಟ್ಟಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.