ಮಗನ ಸಾವಿನ ಸುದ್ದಿ ಕೇಳಿ ಬರುತ್ತಿದ್ದ ತಂದೆ ರಸ್ತೆ ಅಪಘಾತದಲ್ಲಿ ಸಾವು..Father

Accident
Published on

ಉತ್ತರಪ್ರದೇಶ : ( Father ) ಮನೆಯಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್​​ ಸ್ಪರ್ಶಿಸಿ ಮಗು ಸಾವನ್ನಪ್ಪಿದೆ ಎನ್ನುವ ಸುದ್ದಿ ಕೇಳಿ ಬರುತ್ತಿದ್ದ ತಂದೆ ಕೂಡ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಉತ್ತರಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರ ಪ್ರಕಾರ, ಮೂರು ವರ್ಷದ ಆಯನ್ಶ್ ಜೈಸ್ವಾಲ್ ಮನೆಯಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಕುಟುಂಬ ಸದಸ್ಯರು ಅವನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದರು, ಅಲ್ಲಿ ಅವನು ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಸುದ್ದಿ ಕೇಳಿದ ತಕ್ಷಣ, ಅವನ ತಂದೆ ವಿಷ್ಣು ಕುಮಾರ್ ಜೈಸ್ವಾಲ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ತಮ್ಮ ಗ್ರಾಮವಾದ ರಸೂಲಾಬಾದ್‌ಗೆ ಹೊರಟರು.

ಮಗನ ಸಾವಿನ ಸುದ್ದಿ ಕೇಳಿ ಕಣ್ಣೀರು ಹಾಕುತ್ತಾ ಆತುರಾತುರವಾಗಿ ಮನೆಯ ಕಡೆಗೆ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಈ ಎರಡು ಸಾವುಗಳು ಕುಟುಂಬವನ್ನು ತೀವ್ರ ದುಃಖದಲ್ಲಿ ಮುಳುಗಿಸಿದ್ದು, ಗ್ರಾಮಸ್ಥರನ್ನು ದಿಗ್ಭ್ರಮೆಗೊಳಿಸಿವೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ ಮತ್ತು  ಕಾರು ಮತ್ತು ಅದರ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net