Fengal Cyclone Effect; ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Fengal Rains
Published on

ಬೆಂಗಳೂರು: ತಮಿಳುನಾಡಿನಲ್ಲಿ ಫೆಂಗಲ್​ ಚಂಡಮಾರುತದ (Fengal Cyclone ) ಅಬ್ಬರ ಶುರುವಾಗಿದ್ದು, ಅದರ ಪ್ರಭಾವ ಕರ್ನಾಟಕದಲ್ಲೂ  ಶುರುವಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

ಅದರಂತೆ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಫೆಂಗಲ್​ ಚಂಡಮಾರುತದ ಎಫೆಕ್ಟ್​ ಜೋರಾಗಿದೆ. ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದ್ದು, ತುಂತುರು ಮಳೆಗೆ ಸಿಟಿ ಮಂದಿ ಪರದಾಡುತ್ತಿದ್ದಾರೆ.

ಫೆಂಗಲ್ ಚಂಡಮಾರುತದಿಂದ ಜಡಿ ಮಳೆ, ವಿಪರೀತ ಚಳಿ ಹಿನ್ನೆಲೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net