ಸ್ಟಾರ್ ಪರ ಮದ್ದೂರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ

05M.D.R.4
Published on
  • ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮದ್ದೂರು ವಿಧಾನಸಭಾ ಕ್ಷೇತ್ರದಾದ್ಯಂತ ಶುಕ್ರವಾರ ಬಿರುಸಿನ ಮತಪ್ರಚಾರ ನಡೆಸಿದರು.

  • ಶಾಸಕ ಕೆ.ಎಂ.ಉದಯ್ ಮಾತನಾಡಿ, ಸರಳ ಸಜ್ಜನಿಕೆ ಹೊಂದಿರುವ ಹಾಗೂ ಸಮಾಜ ಮುಖಿ ಚಿಂತನೆಗಳನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಸರ್ಕಾರದ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

  • ಕಾಂಗ್ರೆಸ್ ಸರ್ಕಾರ ಮಾಡಿರುವ ಅಭಿವೃದ್ಧಿ ಮೇಲೆ ನಾವು ನಿಮ್ಮ ಬಳಿ ಮತ ಕೇಳಲು ಬಂದಿದ್ದೇವೆ. ಚುನಾವಣಾ ಪೂರ್ವದಲ್ಲಿ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ ಮತ್ತಷ್ಟು ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ವಿನಂತಿ ಮಾಡಿದರು.

  • ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮಾತನಾಡಿ, ನಾನು ಈ ಮಣ್ಣಿನ ಮಗ, ನಿಮ್ಮ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಮಂಡ್ಯದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ ನಿಮ್ಮಗಳ ಸೇವೆ ಮಾಡಲು ಚುನಾವಣೆಯಲ್ಲಿ ಅವಕಾಶ ನೀಡಿ ಎಂದು ಮನವಿ ಮಾಡಿದರು.

  • ತಾಲೂಕಿನ ಗೊಲ್ಲರದೊಡ್ಡಿಯ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿದ ನಂತರ ಚುನಾವಣಾ ಪ್ರಚಾರ ಆರಂಭಿಸಲಾಯಿತು. ತಾಲೂಕಿನ ಆತಗೂರು, ಕದಲೂರು, ಹೆಮ್ಮನಹಳ್ಳಿ, ಸೋಮನಹಳ್ಳಿ, ಗೆಜ್ಜಲಗೆರೆ, ಮಲ್ಲನಕುಪ್ಪೆ, ಹೂತಗೆರೆ, ಕೆಸ್ತೂರು ಸೇರಿದಂತೆ 18 ಗ್ರಾಪಂಗಳಲ್ಲಿ ರೋಡ್ ಶೋ ಮೂಲಕ ಬಿರುಸಿನ ಮತಪ್ರಚಾರ ಮಾಡಲಾಯಿತು.

  • ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಶಿವಲಿಂಗಯ್ಯ, ಮುಖಂಡರಾದ ಕೆ.ಆರ್.ಮಹೇಶ್, ಅಜ್ಜಹಳ್ಳಿ ರಾಮಕೃಷ್ಣ, ಎಂ.ಡಿ.ಮಹಾಲಿಂಗಯ್ಯ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net