ಹಿಂದಿ ಹೇರಿಕೆ ವಿರುದ್ಧ ಹೋರಾಟ

hinidi protest
ಹಿಂದಿ ಹೇರಿಕೆ ವಿರೋಧಿಸಿ ಕರವೇ (ಕನ್ನಡಪರ ಸಂಘಟನೆಗಳ ಒಕ್ಕೂಟ) ಪ್ರಮುಖರಾದ ಮಂಜು, ಜ್ಯೋತಿ ಸೋಮಶೇಖರ್, ಎಸ್.ಮಧು, ಕುಸುಮಾ, ಮೆಹರುನ್ನೀಸಾ, ಮಂಜುಳಾ ನಾಗರಾಜ್, ಎಸ್.ಮಧು, ಲೀಲಾವತಿ ಮುಂತಾದವರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಹಿಂದಿ ಮಾತನಾಡದ ರಾಜ್ಯಗಳ ಮೇಲೆ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿ ಕರವೇ (ಕನ್ನಡಪರ ಸಂಘಟನೆಗಳ ಒಕ್ಕೂಟ) ನೇತೃತ್ವದಲ್ಲಿ ಕನ್ನಡಪರ ಹೋರಾಟಗಾರರರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಸಂಘಟನೆಯೊಂದು ಹಿಂದಿ ಹೇರಿಕೆ ಕುರಿತು ನಡೆಸುತ್ತಿದ್ದ ಸಮಾಲೋಚನಾ ಕಾರ್ಯಾಗಾರದ ವೇಳೆ ನಮ್ಮ ಸಂಘಟನೆಯ ನಾಯಕರು ತೆರಳಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಹಿಂದೆ ಹೇರಿಕೆ ಪ್ರಯತ್ನ ತೆರೆಮರೆಯಲ್ಲಿ ಕೆಲವೊಮ್ಮೆ ಸಾರ್ವಜನಿಕವಾಗಿಯೇ ನಡೆಯುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಭಾಗದಲ್ಲಿ ಹಿಂದಿ ಪ್ರಚಾರಕ್ಕೆ ಸಂಬಂಧಿಸಿ ಕಾರ್ಯಕ್ರಮ ಆಯೋಜಿಸಿದರೆ ಅದನ್ನು ನಮ್ಮ ಸಂಘಟನೆ ಸಹಿಸುವುದಿಲ್ಲ. ಹಾಗೆಯೇ ನಮ್ಮ ಸಂಘಟನೆ ಕಾರ್ಯಕರ್ತರ ಮೇಲೆ ಹೂಡಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಮಂಜು, ರಾಜ್ಯ ಕಾರ್ಯದರ್ಶಿ ಎಸ್.ಮಧು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಪ್ರಮುಖರಾದ ಜಾಹ್ನವಿ ರೆಡ್ಡಿ, ಲೀಲಾವತಿ, ಕುಸುಮಾ, ಕಲಾವತಿ, ಮೆಹರುನ್ನೀಸಾ, ಮುಜೀಬಾ ಖಾನಂ, ಮಂಜುಳಾ ನಾಗರಾಜ್, ಶೈಲೇಶ್‌ಕುಮಾರ್, ಅಂಬರೀಶ್, ರವಿ, ನವೀನ್, ನ್ಯಾಮತ್ ಬೇಗ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net