VIDEO | ಮಹಿಳೆ ಮತ್ತು ಪೊಲೀಸ್​ ನಡುವೆ ಮಾರಾಮಾರಿ!; ಕಾರಣ ಹೀಗಿದೆ

Untitled design - 2023-10-26T184653.134
Published on

ಅಲಿಗಢ: ಮಹಿಳೆ ಮತ್ತು ಪೊಲೀಸ್ ಅಧಿಕಾರಿಯ ನಡುವೆ ನಡೆದ ಮಾರಾಮಾರಿ ಘಟನೆಯ ದೃಶ್ಯವೊಂದು ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಕುರಿ ಮಾಂಸದ ಅಂಗಡಿಯೊಂದರಲ್ಲಿ ಮಹಿಳೆ ಮತ್ತು ಪೊಲೀಸ್ ಅಧಿಕಾರಿ ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿದೆ. ಈ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ವರದಿಯಾಗಿದೆ.

ಅಕರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲ್ಖಾನಾ ಚೌಕಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಹಿಳೆ ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಮಾಂಸದಂಗಡಿಯೊಳಗೆ ಜಟಾಪಟಿ ನಡೆಸಿದ್ದಾರೆ. ಇಬ್ಬರ ನಡುವಿನ ಗದ್ದಲಕ್ಕೆ ಅಂಗಡಿಯ ಸುತ್ತಮುತ್ತಲಿದ್ದ ಜನ ತಕ್ಷಣವೇ ಸ್ಥಳದಲ್ಲಿ ಜಮಾಯಿಸಿದ್ದಾರೆ.

ಇಬ್ಬರು ನಡುವೆ ಮಾರಾಮಾರಿ ನಡೆಯಲು ಕಾರಣ ಮಹಿಳೆಯ ಬಳಿ ಪೊಲೀಸ್ ಅಧಿಕಾರಿ ಎರಡು ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸ್ ಅಧಿಕಾರಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಂಗಡಿ ಮಾಲೀಕ ಮೆಹಂದಿ ಹಸನ್ ಆರೋಪಿಸಿದ್ದಾರೆ.

ಪೊಲೀಸ್ ಅಧಿಕಾರಿ ತನ್ನ ಅಂಗಡಿಯೊಳಗೆ ಮಹಿಳೆಯ ಮೇಲೆ ಹಲ್ಲೆ ನಡೆಸಿದರು ಮತ್ತು 2 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟರು. ಲಂಚ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಬೆದರಿಕೆಯು ಹಾಕಿದರು ಎಂದು ಹಸನ್ ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net